ಬಂಟ್ವಾಳ :ವಾಮದಪದವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 34 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಅ.24 ರಿಂದ 26 ರವರೆಗೆ ವಾಮದಪದವಿನ ಗಣೇಶ ಮಂದಿರದಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ರಮೇಶ ಶೆಟ್ಟಿ ತಿಳಿಸಿದ್ದಾರೆ. ಅ.24 ರಂದು ಗೌರಿ ಗಣೇಶ ಮೂರ್ತಿ ಪ್ರತಿಪ್ಠಾಪನೆ ನಡೆಯಲಿದ್ದು,ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ, ಸಾಂಸ್ಕ್ರತಿಕ ಕಾರ್ಯಕ್ರಮಗಳ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
