ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಹಿಂದೂ ಹಿತರಕ್ಷಣಾ ವಿಶ್ವಸ್ಥ ಮಂಡಳಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸಿದ್ಧಕಟ್ಟೆ ಕೇಂದ್ರ ಮೈದಾನದಲ್ಲಿ 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶನಿವಾರ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ಇದರ ವಿದ್ಯಾರ್ಥಿಗಳು ವಿವಿಧ ರಾಜ್ಯಗಳ ಆಕರ್ಷಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು. ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೊ ಮತ್ತಿತರರು ಇದ್ದರು.
