ಬಂಟ್ವಾಳ: ಸಮಾಜದಲ್ಲಿ ಎಲ್ಲರೂ ಒಟ್ಟಾಗಿ ಸಾರ್ವಜನಿಕ ಗಣೇಶೋತ್ಸವದಂತಹ ಧಾರ್ಮಿಕ ಆಚರಣೆ ನಡೆಸಿದಾಗ ಪರಸ್ಪರ ಸೌಹಾರ್ದತೆ ಮತ್ತು ಒಟ್ಟು ರಾಷ್ಟ್ರೀಯ ಭಾವೈಕ್ಯತೆಗೆ ಪೂರಕವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಇಲ್ಲಿನ ರಾಯಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಶನಿವಾರ ನಡೆದ ಆರನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹೊಸ್ಮಾರು ಬಲ್ಯೊಟ್ಟು ವಿಖ್ಯಾತಾನಂದ ಸ್ವಾಮೀಜಿ ಅಶೀರ್ವಚನ ನೀಡಿ, ವಿಘ್ನೇಶ್ವರನ ಆರಾಧನೆಯಿಂದ ಲೋಕ ಕಲ್ಯಾಣದ ಜೊತೆಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಶೇಖರ ಕುಕ್ಕೇಡಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಎಪಿಎಂಸಿ ಸದಸ್ಯ ಎಂ. ಪದ್ಮರಾಜ ಬಲ್ಲಾಳ್, ಸಮಿತಿ ಅಧ್ಯಕ್ಷ ಗೋಪಿನಾಥ ರೈ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ, ಪ್ರಮುಖರಾದ ಬೇಬಿ ಕುಂದರ್, ಲೋಕೇಶ ಪೆದಮಲೆ, ಮೆಲ್ವಿನ್ ಜಯಕರ್, ಸಮಿತಿ ಕೋಶಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಸತೀಶ ಕೊಯಿಲ, ಸದಾನಂದ ಶೆಟ್ಟಿ ದರ್ಭೆ, ಚಂದ್ರಶೇಖರ ಆಚಾರ್ಯ, ದೇವದಾಸ ದಡ್ಡು ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯಿಲ ಸ್ವಾಗತಿಸಿ, ಕಾರ್ಯದರ್ಶಿ ಸತೀಶ್ ಕಾರಂಬಡೆ ವಂದಿಸಿದರು. ಪುರುಷೋತ್ತಮ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.
