ಕೈಕಂಬ :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ಮತ್ತು ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಕೈಕಂಬ ಇವರ ಜಂಟಿ ಆಶ್ರಯದಲ್ಲಿ ಕಿನ್ನಿಕಂಬಳ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಪ್ರತಿಭಾಕಾರಂಜಿ ಅವರ್ ಲೇಡಿ ಆಫ್ ಪೊಂಪೈ ಶಾಲೆಯಲ್ಲಿ ನಡೆಯಿತು. ಕಂದಾವರ ಪಂಚಾಯತ್ ಅಧ್ಯಕ್ಷೆ ವಿಜಯಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕಿ ಪ್ಲೋರೆನ್ಸ್ ಮೆಂಡಿಸ್ ಉದ್ಘಟಿಸಿದರು.

1vp prathiba karanjiಮುಖೋಪಾಧ್ಯಾಯ ಮಹೇಶ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಮೋಹಿನಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸ್ವರ್ಣಲತಾ ಸ್ವಾಗತಿಸಿದರು. ವೀಣಾ ವಂದಿಸಿದರು. ಶಂಕರಿ ಕಾರ್ಯಕ್ರಮ ನಿರೂಪಿಸಿದರು. ಹನ್ನೊಂದು ಶಾಲೆಗಳ 330 ವಿಧ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *