ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಫಾದರ್ ಮುಲ್ಲರ್ಸ್ ಆಸ್ಪತ್ರೆ ತುಂಬೆ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಸಾಧರಣ ಕಡಿಮೆ ತೂಕದ ಮಕ್ಕಳ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಸ್ತ್ರೀಶಕ್ತಿ ಭವನ ಬಿ.ರೋಡಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ ಉದ್ಘಾಟಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ, ರೋಟರಿ ಕ್ಲಬ್ ಕಾರ್ಯದರ್ಶಿ ನಾರಾಯಣ ಹೆಗ್ಡೆ, ತುಂಬೆ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಡಾ| ಶೈಲಿ, ರೋಟರ ಕ್ಲಬ್ ನಿಕಟಪೂರ್ವ ಅಧ್ಯಕ್ಷ ರಿತೇಶ್ ಬಾಳಿಗಾ, ರೋಟರಿ ಕ್ಲಬ್‍ನ ಸದಸ್ಯರಾದ ಮಂಜುನಾಥ ಆಚಾರ್ಯ, ಪ್ರಕಾಶ್ ಕಾರಂತ್, ಬೇಬಿ ಕುಂದರ್, ವಸಂತ ಪ್ರಭು, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಡಾ| ವಾಣಿಶ್ರೀ, ನೀತಾ ಇಸಬೆಲ್ಲಾ ಉಪಸ್ಥಿತರಿದ್ದರು.
