ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸುವ ಬಗ್ಗೆ ಕಲ್ಪನೆ ಹೊಂದಿರುವ ಶಿಲ್ಪಿಯಂತಹ ಶಿಕ್ಷಕರು ಸಹಿತ ಪ್ರೀತಿ ಮತ್ತು ಸಂತೋಷ ಬಯಸುವ ವಿದ್ಯಾರ್ಥಿಗಳಿಗೆ ಅವರ ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡುವ ಮಹತ್ತರ ಜವಾಬ್ದಾರಿ ಹೊಂದಿರುವ ಪೋಷಕರು ಕೂಡಾ ಸ್ವಯಂ ಆತ್ಮ ವಿಮರ್ಶೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ನಿವೃತ್ತ ಪ್ರಾಧ್ಯಾಪಕ ವೃಷಭರಾಜ್ ಜೈನ್ ಹೇಳಿದ್ದಾರೆ.ಬಂಟ್ವಾಳದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಗುರುವಂದನಾ ಕಾರ್ಯಕ್ರಮದಲ್ಲಿ ಅವರು ಪ್ರಧಾನ ಉಪನ್ಯಾಸ ನೀಡಿದರು. ಜಗತ್ತಿನ ಶ್ರೇಷ್ಟ ವಿದ್ಯಾಕ್ಷೇತ್ರವಾಗಿ ಗುರುತಿಸಿಕೊಂಡ ಫಿನ್ಲ್ಯಾಂಡ್ ಪುಟ್ಟ ರಾಷ್ಟ್ರದಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಪಠ್ಯಕ್ಕೆ ಬದಲಾಗಿ ಪ್ರಕೃತಿ ಶಿಕ್ಷಣ ನೀಡುವ ಮೂಲಕ ಸಂಶೋಧನಾ ಮನೋಭಾವ ಮೂಡಿಸಲಾಗುತ್ತಿದೆ. ಮಕ್ಕಳಿಗೆ ಬುದ್ಧಿ, ಅಂತಃಕರಣ, ಕೌಶಲ್ಯ ನೀಡುವುದೇ ನಿಜವಾದ ಶಿಕ್ಷಣ ಎಂದು ಅವರು ವಿವರಿಸಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.5btl-Shikshak
ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಆದರೆ ಶಿಕ್ಷಕರು ತಪ್ಪು ಮಾಡಿದಾಗ ಸಮಾಜದಲ್ಲಿ ಇವರ ಬಗ್ಗೆ ತಪ್ಪು ಅಭಿಪ್ರಾಯ ಮೂಡುತ್ತದೆ ಎಂದರು.ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್.ಮಹಮ್ಮದ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ರೋಟರಿ ಕ್ಲಬ್ ಅಧ್ಯಕ್ಷ ಬಿ.ಸಂಜೀವ ಪೂಜಾರಿ, ಕರ್ಕೇರಾ ಕಾರ್ಯದರ್ಶಿ ಕೆ.ನಾರಾಯಣ ಹೆಗ್ಡೆ ಮತ್ತಿತರರು ಶುಭ ಹಾರೈಸಿದರು.
ಇದೇ ವೇಳೆ ನಿವೃತ್ತ ಮತ್ತು ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಡಯೆಟ್ನ ಚಂದ್ರಾವತಿ, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ಕೆ.ರಮೇಶ ನಾಯಕ್ ರಾಯಿ, ಸಕರ್ಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೊ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಕ್ರೀಡಾಧಿಕಾರಿ ನವೀನ್ ಮತ್ತಿತರರು ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶಿವಪ್ರಕಾಶ್ ಸ್ವಾಗತಿಸಿ, ಸಮನ್ವಯಾಧಿಕಾರಿ ರಾಜೇಶ್ ವಂದಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *