ಬಂಟ್ವಾಳ ತಾಲ್ಲೂಕಿನ ಶಂಭೂರು ಶ್ರೀರಾಮ ವ್ಯಾಯಾಮ ಶಾಲೆ ವತಿಯಿಂದ ಭಾನುವಾರ ಏರ್ಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ‘ಉಜ್ವಲ’ ಯೋಜನೆಯಡಿ ಮಂಜೂರಾದ ಉಚಿತ ಅಡುಗೆ ಅನಿಲ ಸಿಲಿಂಡರ್ ಮತ್ತು ಸ್ಟೌವ್ನ್ನು ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಅರ್ಹ ಫಲಾನುಭವಿಗಳಿಗೆ ವಿತರಿಸಿದರು. ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ವಿಕಾಸ್ ಪುತ್ತೂರು, ಬಿ.ದಿನೇಶ್ ಭಂಡಾರಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಪುರುಷೋತ್ತಮ ಟೈಲರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶೋಧರ ಕಬರ್ೆಟ್ಟು, ವ್ಯಾಯಾಮ ಶಾಲಾ ಅಧ್ಯಕ್ಷ ಆನಂದ ಎ. ಶಂಭೂರು, ಕೇಶವ ಮತ್ತಿತರರು ಇದ್ದರು. 
