ಮಕ್ಕಳ ಸುಪ್ತ ಪ್ರತಿಭೆಗಳನ್ನು ಬೇಳಕಿಗೆ ತರುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ನಡೆಸಲ್ಪಡುವ ಪ್ರತಿಭಾ ಕಾರಂಜಿ ಸ್ಪರ್ಧೆಯ ಜಿಲ್ಲಾ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಕೈಕಂಬದ ಅವರ್ ಲೇಡಿ ಆಫ್ ಪಾಂಪೆ ಶಾಲೆಯ ಊರ್ವಿ ಸುಲಾಯ ಇವರು ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಅದೇ ಶಾಲೆಯ ವಿದ್ಯಾರ್ಥಿ ನಿಷ್ಕರ್ಷ್ ಭಾಷಣ ಹಾಗೂ ಚರ್ಚಾ ಸ್ಪರ್ದೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
