ಬಂಟ್ವಾಳ : ಬಂಟರ ಸಂಘ ಬಂಟವಾಳ ತಾಲೂಕು (ರಿ.) ಇದರ 13ನೇ ವಾರ್ಷಿಕ ಮಹಾಸಭೆಯು ಸೆ. 2ರಂದು ಬಂಟವಾಳದ ಬಂಟರ ಭವನದಲ್ಲಿ ಸಂಘದ ಅಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 38 ಜನ ವಿಕಲಚೇತನರಿಗೆ ಸಹಾಯ ಧನವನ್ನು ವಿತರಿಸಲಾಯಿತು. ಪದಾಧಿಕಾರಿಗಳಾದ ಕಿರಣ್ ಹೆಗ್ಡೆ ಅನಂತಾಡಿ, ಪ್ರಫುಲ್ಲ ಆರ್. ರೈ ವಿಠಲ್ ಕೋಡಿ, ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ, ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಜಗದೀಶ್ ಶೆಟ್ಟಿ ಇರಾಗುತ್ತು, ಚಂದ್ರಹಾಸ ರೈ ಬಾಲಾಜಿಬೈಲು ಮತ್ತು ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

