ಬಂಟ್ವಾಳ | ವಿದ್ಯಾರ್ಥಿಯ ಸದೃಢ ವಿಕಾಸಕ್ಕೆ ಕ್ರೀಡೆಯು ಅಗತ್ಯ ಎಂದು ಮಂಗಳೂರು-ಡೋಂಗ್ರಕೇರಿ ಕೆನರಾ ಪ್ರೌಢಶಾಲೆಯ ಸಂಚಾಲಕರು ಮತ್ತು ಕೆನರಾ ಇಂಜಿನಿಯರ್ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ ಪುರುಷೆÇೀತ್ತಮ ಶೆಣೈ ಹೇಳಿದರು.
ಅವರು ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಬಂಟ್ವಾಳ ತಾಲೂಕುಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯು ವಿದ್ಯಾರ್ಥಿಯ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಜತೆ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುತ್ತದೆ. ಕಠಿಣ ಪರಿಶ್ರಮ, ತಾಳ್ಮೆ-ಶಿಸ್ತು-ಸಂಯಮ ಮತ್ತು ಹೊಂದಾಣಿಕೆ ಮುಂತಾದ ಗುಣಗಳನ್ನು ಜೀವನದಲ್ಲಿ ಆಳವಡಿಸಿಕೊಂಡು ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು. ಕೇವಲ ಬಹುಮಾನ ಪಡೆಯುದೇ ಮುಖ್ಯವಲ್ಲ. ನಿರಂತರ ತೊಡಗಿಸಿಕೊಳ್ಳುವಿಕೆ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ರೋಗಮುಕ್ತ ಆರೋಗ್ಯಕರ ಜೀವನಕ್ಕೆ ಕ್ರೀಡೆ ಪ್ರ್ರಯೋಜನಕಾರಿಯಾಗುತ್ತದೆ ಎಂದು ಹೇಳಿದರು.
ಎಸ್.ವಿ.ಎಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಮಾತನಾಡಿ, ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಸೋಲು ಮತ್ತು ಗೆಲುವನ್ನು ಒಂದೇ ದೃಷ್ಟಿಕೊನದಿಂದ ಸ್ವೀಕರಿಸಬೇಕು. ಸೋಲು ಗೆಲುವಿನ ಮೆಟ್ಟಿಲು. ಕ್ರೀಡಾಸ್ಫೂರ್ತಿ ಗಮನದಲ್ಲಿ ಅರಿತುಕೊಂಡು ಆಡಬೇಕು ಎಂದು ಹೇಳಿದರು.
ಎಸ್.ವಿ.ಎಸ್ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿ, ದೇಶೀಯ ಆಟವಾದ ಕಬಡ್ಡಿ ಪುರಾತನ ಕಾಲದಿಂದ ಬಂದಂತಹ ಸಂಪ್ರದಾಯಿಕ ಮತ್ತು ಜನಪ್ರಿಯ ಕ್ರೀಡೆ. ಈ ಆಟ ವೀಕ್ಷಕನ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ವಿದ್ಯಾರ್ಥಿ ಯಾವುದೇ ಒಂದು ಕ್ರೀಡೆಯಲ್ಲಿ ಏಕಮನಸ್ಸಿನಿಂದ ಮುನ್ನಡೆದರೆ ಬದುಕಿನಲ್ಲಿ ಗರಿಷ್ಠ ಮಟ್ಟದ ಸಾಧನೆ ಮಾಡಲು ಸಾಧ್ಯ. ಕ್ರೀಡೆಯು ಶಾರೀರಿಕ ಉನ್ನತಿಯ ಜತೆ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.
ತಾಲೂಕು ಮಟ್ಟದ ಪ.ಪೂ.ಕಾಲೇಜು ಕ್ರೀಡಾ ಸಂಯೋಜಕ ಮತ್ತು ವಿಠ್ಠಲ ಪ.ಪೂ.ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಬಾಲಕೃಷ್ಣ ಗೌಡ, ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಕ್ರೀಡಾ ಸಲಹೆಗಾರ ಪ್ರದೀಪ್ ಪೂಜಾರಿ, ಕನ್ನಡ ಉಪನ್ಯಾಸಕ ಚೇತನ್ ಎಂ., ಗಣಿತಶಾಸ್ತ್ರ ಉಪನ್ಯಾಸಕಿ ಕವಿತಾ, ರಾಜ್ಯಶಾಸ್ತ್ರ ಉಪನ್ಯಾಸಕಿ ದೀಪಿಕಾಪ್ರಿಯಾ, ಹಿಂದಿ ಉಪನ್ಯಾಸಕಿ ದಿವ್ಯಲಕ್ಷ್ಮೀ, ಕಬಡ್ಡಿ ತರಬೇತುದಾರ ತಾರಾನಾಥ ಜಿ.ಎಸ್. ಮತ್ತಿತರರು ಸಹಕರಿಸಿದರು.
ಬಂಟ್ವಾಳ ತಾಲೂಕಿನ ವಿವಿಧ ಪ.ಪೂ. ಕಾಲೇಜುಗಳ ಹುಡುಗರ 20 ತಂಡ ಮತ್ತು ಹುಡುಗಿಯರ 04 ತಂಡಗಳು ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದವು.
ವಿದ್ಯಾರ್ಥಿನಿ ಶ್ವೇತಾ ಕೆ.ಪಿ ಮತ್ತು ಮಾನಸ ಪ್ರಾರ್ಥಿಸಿದರು. ಎಸ್.ವಿ.ಎಸ್ ಪ.ಪೂ. ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಅಪರ್ಣ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಲೆಪ್ಟಿನೆಂಟ್ ಸುಂದರ್ ವಂದಿಸಿದರು.
.
