ದ ಕ ಜಿ ಪಂ ಹಿ ಪ್ರಾ ಶಾಲೆ ವಿದ್ಯಾಗಿರಿ ಪಡಿಬಾಗಿಲು ಇಲ್ಲಿ `ಸ್ವಚ್ಛತಾ ವರ್ಷಾಚರಣೆ 2017′ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಸದಸ್ಯ ಪ್ರಭಾಕರ ಶೆಟ್ಟಿ ಉದ್ಘಾಟಿಸಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.1 (1)

ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ರಘು ಟಿ ವೈ ಇವರು ಸಂಪನ್ಮೂಲ ವಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯ ನರಸಿಂಹ ಬಲ್ಲಾಳ್, ಇತರ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಹಶಿಕ್ಷಕರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಮಲ್ಲಿಕಾ ವಂದಿಸಿದರು. ಟಿ ಜಿ ಟಿ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *