ಬಂಟ್ವಾಳ: ಸಾಮಾಜಿಕ ನ್ಯಾಯದಿಂದ ವಂಚಿತರಾದ ಹಿಂದುಳಿದ ವರ್ಗದ ಮತ್ತು ಬಡಜನತೆಗೆ ನಿವೇಶನ , ಮನೆ ಒದಗಿಸಿ ಸ್ವಾಭಿಮಾನದ ಬದುಕು ನೀಡಿದ್ದು ಕಾಂಗ್ರೆಸ್ ಸರಕಾರವಾಗಿದೆ ಎಂದು ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು.
ಬಂಟ್ವಾಳ ತಾ| ಉಳಿ, ಕಕ್ಯಪದವು ಶ್ರೀ ಪಂಚದುರ್ಗಾಪರಮೆಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಉಳಿ ಗ್ರಾ.ಪಂ. ವ್ಯಾಪ್ತಿಯಲ್ಲಿನ 94ಸಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಹಕ್ಕುಪತ್ರ ಹಾಗೂ ಇತರ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಸ್ವಂತ ಜಮೀನು ಹೊಂದಿ ಸಶಕ್ತರಾಗಬೇಕು, ಆ ಮೂಲಕ ಸರಕಾರದ ಸವಲತ್ತುಗಳನ್ನು ಪಡೆಯಲು ಅರ್ಹರಾಗಬೇಕು ಎಂಬ ಉದ್ಧೇಶದಿಂದ ವಿವಿಧ ವಸತಿ ಯೋಜನೆಗಳಲ್ಲದೆ ಇದೀಗ 94 ಸಿ ಹಾಗೂ 94 ಸಿಸಿ ಕಾರ್ಯಕ್ರಮದಿಂದ ಭೂ ಮಾಲಕತ್ವ ದೊರಕಿಸಿ ಕೊಟ್ಟಿದೆ ಎಂದು ಹೇಳಿದರು.
ಉಳಿ ಗ್ರಾ.ಪಂ.ಅಧ್ಯಕ್ಷೆ ದೀನಾಕ್ಷಿ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರೊಡ್ರಿಗಸ್, ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ. ಬಂಗೇರ, ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಮಾಜಿ ಗ್ರಾ.ಪಂ. ಸದಸ್ಯ ಡೀಕಯ್ಯ ಬಂಗೇರ, ಕೆಪಿಸಿಸಿ ಸದಸ್ಯ ರಾಜ್‍ಕುಮಾರ್ ಬೆಂಗಳೂರು, ತಾ.ಪಂ.ಸದಸ್ಯೆ ಬೇಬಿ ಕೃಷ್ಣಪ್ಪ, ಗ್ರಾ.ಪಂ.ಉಪಾಧ್ಯಕ್ಷ ಸುರೇಶ್ ಮೈರ, ಸದಸ್ಯ ಸಂಜೀವ ಗೌಡ ಅಗ್ಪಲ, ಪಂ.ಅ. ಅ„ಕಾರಿ ಶ್ರೀಧರ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ, ರಾಷ್ಟ್ರೀಯ ಕುಟುಂಬ ಸಹಾಯಧನ, ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ನವೀನ್ ಕುಮಾರ್, ಗ್ರಾಮಕರಣಿಕ ರಾಜು ಲಮಾಣಿ ಅವರನ್ನು ಗ್ರಾ.ಪಂ.ವತಿಯಿಂದ ಸಚಿವರು ಸಮ್ಮಾನಿಸಿದರು.
ಉಳಿ ವ್ಯ.ಸೇ.ಸ. ಬ್ಯಾಂಕ್ ಅಧ್ಯಕ್ಷ ಎ. ಚೆನ್ನಪ್ಪ ಸಾಲ್ಯಾನ್ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ನವೀನ್ ಪ್ರಸ್ತಾವಿಸಿದರು. ಪಂ.ಅ. ಅ„ಕಾರಿ ಶ್ರೀಧರ ಫಲಾನುಭವಿಗಳ ಪಟ್ಟಿ ವಾಚಿಸಿದರು. ವಿಶ್ವನಾಥ ಸಾಲ್ಯಾನ್ ಬಿತ್ತ ವಂದಿಸಿದರು. ರಾಜೀವ ಕಕ್ಯಪದವು ಕಾರ್ಯಕ್ರಮ ನಿರೂಪಿಸಿದರು.
