ಸುದ್ದಿ9ಬಂಟ್ವಾಳ:ತಾಲ್ಲೂಕಿನ ಮಾರಿಪಳ್ಳ ಸಮೀಪದ ದೇವಸ್ಯ ರಸ್ತೆ ನಡುವಿನ ಬಾವಿಯೊಂದಕ್ಕೆ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ನರೇಶ(52) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರದಿಂದ ನಾಪತ್ತೆಯಾಗಿದ್ದ ಇವರು ಬುಧವಾರ ಬೆಳಿಗ್ಗೆ ಮನೆ ಸಮೀಪದ ಸಂಬಂಧಿಕರ ಬಾವಿಯಲ್ಲಿ ಪತ್ತೆಯಾಗಿದ್ದಾರೆ. ಮಾನಸಿಕವಾಗಿ ಅಸ್ವಸ್ತಗೊಂಡಿದ್ದ ಇವರು ಪತ್ನಿ ಮತ್ತು ಮಕ್ಕಳನ್ನು ತೊರೆದಿದ್ದರು ಎಂದು ಬಮಟ್ವಾಳ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.
