ಸುದ್ದಿ9 ಬಂಟ್ವಾಳ:ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಮಂದಿ ಅವಕಾಶ ವಂಚಿತ ಪ್ರತಿಭಾನ್ವಿತ ವಿದ್ಯಾಥರ್ಿಗಳಿಗೆ ತೀರಾ ಬಡತನ ಅಡ್ಡಿಯಾಗಿದೆ. ಇಂತಹ ಪ್ರತಿಭೆಗಳಿಗೆ ಸಕರ್ಾರ ಮತ್ತು ಶಿಕ್ಷಣ ಸಂಸ್ಥೆಗಳ ಜೊತೆಗೆ ಮಕ್ಕಳ ಹೆತ್ತವರಿಂದಲೂ ಸೂಕ್ತ ಪ್ರೋತ್ಸಾಹ ದೊರೆತಾಗ ಮಾತ್ರ ಅವರಿಂದ ಉನ್ನತ ಮಟ್ಟದ ಸಾಧನೆ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ, ಮನ್ದೇವ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.
ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಗುರುವಾರ ನಡೆದ ಕೆರೆಬಳಿ ಮತ್ತು ರಾಯಿ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿಯಂತಹ ವಿವಿಧ ಸ್ಪಧರ್ೆಗಳಲ್ಲಿ ಹೆಚ್ಚಿನ ವಿದ್ಯಾಥರ್ಿಗಳು ಪಾಲ್ಗೊಳ್ಳುವಂತೆ ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದರು.
ಸ್ಥಳೀಯ ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ, ತಾ.ಪಂ.ಸದಸ್ಯೆ ರೇವತಿ ಆರ್.ಪೂಜಾರಿ ಮತ್ತಿತರರು ಶುಭ ಹಾರೈಸಿದರು.
ಕುಕ್ಕಿಪಾಡಿ ಗ್ರಾ.ಪಂ.ಸದಸ್ಯ ಸುರೇಶ ಅಂಚನ್, ಶಿಕ್ಷಣ ಸಂಯೋಜಕ ರಮಾನಂದ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಡಿ.ಕುಮಾರ್, ಪ್ರಾಥಮಿಕ ಶಿಕ್ಷಕರ ಸಂಘದ ಪ್ರತಿನಿಧಿ ರುಡಾಲ್ಫ್ ದೇವಾನಂದ, ಸಂಸ್ಥೆ ಸಂಚಾಲಕ ಬಿ.ರಾಧಾಕೃಷ್ಣ ಶೆಟ್ಟಿ, ಕಾನೂನು ಸಲಹೆಗಾರ ಕರುಣಾಕರ ಶೆಟ್ಟಿ, ಸದಸ್ಯ ವಿಜಯ ಕುಮಾರ್ ಚೌಟ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 25ಕ್ಕೂ ಮಿಕ್ಕಿ ಶಾಲೆ ವಿದ್ಯಾಥರ್ಿಗಳು ವಿವಿಧ ಸ್ಪಧರ್ೆಯಲ್ಲಿ ಪಾಲ್ಗೊಂಡಿದ್ದರು.
ಪ್ರೌಢಶಾಲೆ ಮುಖ್ಯಶಿಕ್ಷಕಿ ಜಯಶ್ರೀ ಸ್ವಾಗತಿಸಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೊ ವಂದಿಸಿದರು.
ಶಿಕ್ಷಕಿ ಶ್ರೀಶಂಕರಿ ಕಾರ್ಯಕ್ರಮ ನಿರೂಪಿಸಿದರು.

7btl-1

 

By suddi9

Leave a Reply

Your email address will not be published. Required fields are marked *