ವಿಟ್ಲ: ಬಿಜೆಪಿ ವತಿಯಿಂದ ವಿಟ್ಲದಲ್ಲಿ ಅವೈಜ್ಞಾನಿಕ ಮರಳು ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು . ಪ್ರತಿಭಟನೆಯ ನೇತ್ರತ್ವವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಾಜೀವ ಭಂಢಾರಿ, ಮಂಡಲ ರೈತ ಮೋರ್ಚಾ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಸುನಿಲ್ ದಡ್ಡು, ಪುತ್ತೂರು ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಇಬ್ರಾಹಿಂ ಮಾಮೇಶ್ವರ, ಜಿ ಪಂ ಮಾಜಿ ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ ಕಾರ್ಯದರ್ಶಿ ಉದಯ ಕುಮಾರ್, ವಿಟ್ಲ ಶ್ರೀನಿವಾಸ್ ಸೇಲ್ಸ್ನ ರಾಧಾಕೃಷ್ಣ ನಾಯಕ್, ನಿತ್ಯಾನಂದ ನಾಯಕ್, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ, ಕಟ್ಟಡ ಕಾರ್ಮೀಕರು ಮೊದಲಾದವರು ಭಾಗವಹಿಸಿದ್ದರು.
