ವಿಟ್ಲ:ಕರ್ನಾಟಕ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ವಿಠಲ ಪದವಿ ಪೂರ್ವ ಕಾಲೇಜು ವಿಟ್ಲ ಇವರ ವಿದ್ಯಾರ್ಥಿಗಳಲ್ಲಿ `ವೈಜ್ಞಾನಿಕ ಮನೋಭಾವನೆ’ ವಾರ್ಷಿಕ ಶಿಬಿರವು ವಿಟ್ಲ ಮಾದರಿ ಶಾಲೆಯಲ್ಲಿ 27-09-2017 ರಿಂದ 03-10-2017 ರ ತನಕ ನಡೆಯಲಿದ್ದು ಈ ಶಿಬಿರವನ್ನು ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ ಉದ್ಘಾಟಿಸಿದರು.
ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾದರಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ, ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಪಟ್ಟಣ ಪಂಚಾಯತ್ ಸದಸ್ಯರುಗಳಾದ ಜಯಂತ ಮತ್ತು ಶಮೀರ್ ಪಳಿಕೆ, ಜೆಸಿ ವಲಯ ಶಾಶ್ವತ ಯೋಜನೆಗಳ ಸಂಯೋಜಕ ಬಾಬು ಕೊಪ್ಪಳ, ವಿಠಲ ವಿದ್ಯಾ ಸಂಘದ ಕಾರ್ಯದರ್ಶಿ ಐಶವಂತ ವಿಟ್ಲ, ಸದಸ್ಯ ಪದ್ಮಯ್ಯ ಗೌಡ, ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಎಂ ಎಸ್ ಭಾಗವಹಿಸಿದ್ದರು. ಶಿಬಿರಾಧಿಕಾರಿ ಅಣ್ಣಪ್ಪ ಸಾಸ್ತಾನ ಪ್ರಸ್ತಾವಿಸಿ ಸ್ವಾಗತಿಸಿದರು. ಉಪನ್ಯಾಸಕ ಪ್ರಕಾಶ್ ನಾಯಕ್ ವಂದಿಸಿದರು. ಉಪನ್ಯಾಸಕ ಶಂಕರನಾರಾಯಣ ಭಟ್ ಕಾರ್ಯಕ್ರಮ ನಿರೂಪಿಸಿದರು.
