ಬಂಟ್ವಾಳ:ಸಮಾಜದಲ್ಲಿ ವಿವಿಧ ಕಾರಣಗಳಿಂದ ಮದ್ಯ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿರುವ ಜನತೆಗೆ ಜೀವನ ಪರಿವರ್ತನೆಗೊಳಿಸಲು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶಯದಂತೆ ಜನಜಾಗೃತಿ ವೇದಿಕೆ ಮೂಲಕ ಇಂತಹ ಅಪೂರ್ವ ಅವಕಾಶ ಒದಗಿಸಿರುವ ಯೋಜನೆ ಜಗತ್ತಿನಲ್ಲೇ ಮಾದರಿಯಾಗಿದೆ ಎಂದು ಬಂಟ್ವಾಳ ಜನಜಾಗೃತಿ ವೇದಿಕೆ ಪ್ರಥಮ ಅಧ್ಯಕ್ಷ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಹೇಳಿದ್ದಾರೆ.

3btl-Vamdpadv
ತಾಲ್ಲೂಕಿನ ವಾಮದಪದವು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಿದ್ಧಕಟ್ಟೆ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಸಹಿತ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಮಂಗಳವಾರ ಆರಂಭಗೊಂಡ 1,131ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮದ್ಯವರ್ಜನ ಶಿಬಿರದ ಮೂಲಕ ಮದ್ಯವ್ಯಸನಿಯೊಬ್ಬರು ಪರಿವರ್ತನೆಗೊಂಡು ಹೊಸ ಬದುಕು ಆರಂಭಿಸಿದಾಗ ಅವರಿಗೆ ಸಮಾಜದಲ್ಲಿ ಗೌರವವೂ ಪ್ರಾಪ್ತಿಯಾಗುತ್ತದೆ ಎಂದು ಅವರು ಹೇಳಿದರು.

ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್ ಎಂ.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮದ್ಯವರ್ಜನ ಶಿಬಿರದಲ್ಲಿ ಮದ್ಯವ್ಯಸನಿಗಳನ್ನು ಸೇರ್ಪಡೆಗೊಳಿಸುವ ಮೂಲಕ ಅವರಿಗೆ ಹೊಸ ಬದುಕು ದೊರಕಿಸಿ ಕೊಡುವುದು ಕೂಡಾ ಒಂದು ಪುಣ್ಯದ ಕೆಲಸವಾಗಿದೆ ಎಂದರು.ತಾಲ್ಲೂಕು ಪಂಚಾಯಿತಿ ಸದಸ್ಯರಾದ ರತ್ನಾವತಿ ಜೆ.ಶೆಟ್ಟಿ, ಮಂಜುಳಾ ಸದಾನಂದ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಎನ್.ಪ್ರಕಾಶ್ ಕಾರಂತ, ಯಜಮಾನ ಸಂಸ್ಥೆ ಮುಖ್ಯಸ್ಥ ಟಿ.ವರದರಾಜ ಪೈ, ಯೋಜನಾಧಿಕಾರಿ ಸುನಿತಾ ನಾಯಕ್ ಮತ್ತಿತರರು ಶುಭ ಹಾರೈಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನವೀನಚಂದ್ರ ಶೆಟ್ಟಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸಿ.ಶ್ರೀಧರ ಪೈ, ಸಮಿತಿ ಗೌರವಾಧ್ಯಕ್ಷ ಎಚ್.ಅಮ್ಮು ರೈ ಹಕರ್ಾಡಿ ಮತ್ತಿತರರು ಇದ್ದರು. ಕೃಷಿ ಅಧಿಕಾರಿ ನಾರಾಯಣ ಸ್ವಾಗತಿಸಿ, ಮೇಲ್ವಿಚಾರಕಿ ಹರಿಣಾಕ್ಷಿ ವಂದಿಸಿದರು. ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು

By suddi9

Leave a Reply

Your email address will not be published. Required fields are marked *