ಬಂಟ್ವಾಳ:ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ಇಲ್ಲಿನ ವಿದ್ಯಾರ್ಥಿನಿ ರಮ್ಯಶ್ರೀ ಜೈನ್ ಇವರು ಮೂಡುಬಿದ್ರೆ ಸ್ವರಾಜ್ಯ ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಮತ್ತು ಗುಂಡೆಸೆತ ವಿಭಾಗದಲ್ಲಿ ಪ್ರಥಮ ಸ್ಥಾನ ಗೆದ್ದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದಲ್ಲಿ ಚಕ್ರ ಎಸೆತ ಮತ್ತು ಗುಂಡೆಸೆತ ವಿಭಾಗದಲ್ಲಿ ಈ ಹಿಂದಿನ ಎಲ್ಲಾ ದಾಖಲೆಯನ್ನು ಈಕೆ ಮುರಿದು ರಾಜ್ಯ ಮಟ್ಟಕ್ಕೆ ಆಯ್ಕೆಗೊಳ್ಳುವ ಮೂಲಕ ಶಾಲೆ ಮತ್ತು ತಾಲ್ಲೂಕಿಗೆ ಹೆಮ್ಮೆ ತಂದಿದ್ದಾರೆ ಎಂದು ಮುಖ್ಯಶಿಕ್ಷಕಿ ಸಬಿತಾ ಲವಿನಾ ಪಿಂಟೊ ತಿಳಿಸಿದ್ದಾರೆ.

