ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಇದರ ವತಿಯಿಂದ ವಿಟ್ಲದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭಿಸಲಾದ ಬೆಳಗಿನ ಉಪಹಾರ ಯೋಜನೆಗೆ ಪುತ್ತೂರು ಶಾಸಕಿ ಶಕುಂತಳಾ ಸೆಟ್ಟಿ ಸ್ವಾಮಿ ಪಾದಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸುಬ್ರಾಯ ಪೈ, ಅಧ್ಯಕ್ಷ ಕೃಷ್ಣಯ್ಯ ಕೆ, ಅಳಿಕೆ ಸತ್ಯಸಾಯಿ ವಿದ್ಯಾ ಕೇಂದ್ರದ ನಿವೃತ್ತ ಪ್ರಾಂಶುಪಾಲ ಕೆ ಎಸ್ ಪ್ರಭು, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮದಾಸ ಶೆಣೈ, ಸದಸ್ಯರುಗಳಾದ ಜಯಂತ ಮತ್ತು ಶಮೀರ್ ಪಳಿಕೆ, ನಾರಾಯಣ ಗೌಡ ಬಸವನಗುಡಿ, ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.


