ಸುದ್ದಿ9ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಟ್ಲ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವೀರಕಂಭ ವಲಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ವೀರಕಂಭ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜಿ.ಪಂ. ಸದಸ್ಯ ಎಂ.ಎಸ್. ಮಹಮ್ಮದ್ ಉದ್ಘಾಟಿಸಿದರು. ಈ ಸಂದರ್ಭ ಗ್ರಾ..ಪಂ. ಅಧ್ಯಕ್ಷೆ ಆಶಾಲತಾ, ತಾ.ಪಂ.ಸದಸ್ಯ ಮಾಧವ ಮಾವೆ, ವೀರಕಂಭ ಪಂ. ಅಭಿವೃದ್ಧಿ ಅಧಿಕಾರಿ ಸುನೀತಾ, ಗ್ರಾ.ಪಂ. ಸದಸ್ಯರು, ಆರೋಗ್ಯ ಸಹಾಯಕಿ ಶಶಿಕಲಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಷಿ, ವಲಯ ಮೇಲ್ವಿಚಾರಕಿ ರೂಪಾಕಲಾ, ಅಂ. ಕಾರ್ಯಕತರ್ೆ ಯಶೋಧ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕತರ್ೆಯರು, ಅಂಗನವಾಡಿ ಕಾರ್ಯಕತರ್ೆಯರು, ಮಕ್ಕಳ ತಾಯಂದಿರು, ಸ್ತ್ರೀಶಕ್ತಿ ಸದಸ್ಯೆಯರು ಮತ್ತಿತರರು ಉಪಸ್ಥಿತರಿದ್ದರು.

