ಬಂಟ್ವಾಳ:ತಾಲ್ಲೂಕಿನ ನರಿಕೊಂಬು ಎಂಬಲ್ಲಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ತುಂಬೆ ನೇತ್ರಾವತಿ ನದಿ ಅಣೆಕಟ್ಟೆಯಲ್ಲಿ ಶುಕ್ರವಾರ ಪತ್ತೆಯಾದ ಘಟನೆ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಸತೀಶ ಶೆಟ್ಟಿ (43) ಎಂದು ಗುರುತಿಸಲಾಗಿದ್ದು, ಇವರು ಇದೇ 10ರಂದು ನರಿಕೊಂಬು ಎಂಬಲ್ಲಿ ನೇತ್ರಾವತಿ ನದಿ ಬಳಿ ಜಾನುವಾರು ಮೇಯಿಸುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಹಿಂದೆ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾದಲ್ಲಿ ದುಡಿಯುತ್ತಿದ್ದ ಇವರು ಬಳಿಕ ಮನೆಯಲ್ಲಿ ಕೃಷಿ ಚಟುವಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *