ಪೊಳಲಿ : ಪೊಳಲಿಯ ರಾಮಕೃಷ್ಣ ತಪೋವನದಲ್ಲಿ ಅ.15ರಂದು ಬೆಳಿಗ್ಗೆ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಆಶ್ರಯದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಮಾಹಿತಿ ಮತ್ತು ಮುಕ್ತ ಸಂವಾದ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ದೇರಳಕಟ್ಟೆ ಕೆ ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಆಸ್ಪತ್ರೆಯ ಮನೋರೋಗ ಚಿಕಿತ್ಸಾ ವಿಭಾಗದ ಸುಮನಾ, ಈಗ ಎಲ್ಲರಿಗೂ ಒತ್ತಡ ಇದ್ದೇ ಇರುತ್ತದೆ. ಅದು ಆರ್ಥಿಕ, ಕೌಟುಂಬಿಕ, ಸಾಮಾಜಿಕ ವೈಯಕ್ತಿಕ…ಹೀಗೆ ವಿಭಿನ್ನ ಸ್ವರೂಪದಲ್ಲಿರುತ್ತದೆ. ಕೌನ್ಸಿಲಿಂಗ್ ನಡೆಸುವುದರಿಂದ ಮಾನಸಿಕ ಒತ್ತಡ, ಖಿನ್ನತೆ ಹೋಗಲಾಡಿಸಬಹುದು. ಖಿನ್ನತೆ ಅಧಿಕಗೊಂಡರೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಗುತ್ತದೆ ಎಂದರು. ಇದೇ ವೇಳೆ ಸಮನಾರೊಂದಿಗೆ ಸಭಿಕರು ಸಂವಾದ ನಡೆಸಿದರು.
ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸೇವಾಂಜಲಿ ಪ್ರತಿಷ್ಠಾನದ ಕೆ. ಕೃಷ್ಣ ಕುಮಾರ್ ಪೂಂಜ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತುಂಬೆ ವಲಯ ಚಂದ್ರಶೇಖರ, ಜನಾರ್ದನ ಪುಂಚಮೆ ಮೊದಲಾದವರು ಉಪಸ್ಥಿತರಿದ್ದರು.

