ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಲಯನ್ಸ್, ಲಯನೆಸ್ ಮತ್ತು ಲಿಯೋ ಕ್ಲಬ್ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಅಂದತ್ವ ನಿವಾರಣಾ ಸಂಸ್ಥೆ ಮಂಗಳೂರು, ದ ಕ ಜಿಲ್ಲಾ ಸಂಚಾರಿ ನೇತ್ರ ಘಟಕ ಹಾಗೂ ಮಂಗಳೂರಿನ ಖ್ಯಾತ ಜಿಲ್ಲಾ ಆಸ್ಪತ್ರೆ ಮತ್ತು ಕೆ ಎಂ ಸಿ ನೇತ್ರ ತಜ್ಞರ ತಂಡದಿಂದ ವಿಟ್ಲದ ಶಾಂತಿನಗರ ಅಕ್ಷಯ ಸಭಾ ಭವನದಲ್ಲಿ ಉಚಿತ ನೇತ್ರ ಚಿಕತ್ಸಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.eye

ಈ ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ ಉದ್ಘಾಟಿಸಿದರು. ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಲಿಂಗಪ್ಪ ಗೌಡ ಅಳಿಕೆ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ವಿಪಕ್ಷ ನಾಯಕ ಅಶೋಕ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್‍ನ ಅಧ್ಯಕ್ಷೆ ಡಾ| ಪಿ ಗೌರಿ ಪೈ ಎಂ ಡಿ, ಗೌಡರ ಯಾನೆ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಶ್ರೀಧರ ಗೌಡ, ವೆನ್‍ಲಾಕ್ ಆಸ್ಪತ್ರೆಯ ಡಾ| ಕೀರ್ತನ್, ಡಾ| ಸವಿತಾ, ಡಾ| ಶ್ರೀನಿಧಿ, ನೇತ್ರ ಚಿಕಿತ್ಸಕ ಶಾಂತರಾಜ್ ಮತ್ತು ಲಯನೆಸ್ ಅಧ್ಯಕ್ಷೆ ಭಾರತಿ ಪ್ರಕಾಶ್ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷೆ ವಿನ್ನಿ ಮಸ್ರೇನಸ್ ಪ್ರಸ್ತಾವಿಸಿ ಸ್ವಾಗತಿಸಿದರು. ಮಹೇಶ್ ಅಳಿಕೆ ವಂದಿಸಿದರು. ತೀರ್ಥಪ್ರಸಾದ್ ಕೋಂಗಲಾಯಿ ಕಾರ್ಯಕ್ರಮ ನಿರೂಪಿಸಿದರು. ಸುಮಾರು 250 ಮಂದಿ ಶಿಬಿರದ ಪ್ರಯೋಜನ ಪಡೆದರು.

By suddi9

Leave a Reply

Your email address will not be published. Required fields are marked *