ಬಂಟ್ವಾಳ: ಕರ್ನಾಟಕ ರಾಜ್ಯ 6ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕಾಗಿ ಮತ್ತು ಶೆ. 30 ರಷ್ಟು ಮಧ್ಯಂತರ ಪರಿಹಾರ ಮಂಜೂರಾತಿಗಾಗಿ ಸರಕಾರವನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು, ಜಿಲ್ಲೆ ಮತ್ತು ಕೇಂದ್ರ ಸಂಘದ ವತಿಯಿಂದ ಮುಖ್ಯಮಂತ್ರಿಯವರಿಗೆ ಹಾಗೂ ಸರಕಾರಕ್ಕೆ ಮನವಿಯನ್ನು ತಹಶೀಲ್ದಾರರ ಮೂಲಕ ತಹಶೀಲ್ದಾರರ ಕಚೇರಿಯಲ್ಲಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅದ್ಯಕ್ಷ ಉಮಾನಾಥ ರೈ ಮೇರಾವು ಕಾರ್ಯದರ್ಶಿ ರಮೇಶ್ ನಾಯಕ್ ರಾಯಿ, ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ರೈ, ಕಾರ್ಯದರ್ಶಿ ಜಯರಾಮ್, ಹೈಸ್ಕೂಲ್ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಜೊಯೆಲ್ ಲೊಬೋ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ನವೀನ್ ರೈ , ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ತೌಫೀದ್, ತಾಲೂಕು ಸರಕಾರಿ ನೌಕರರ ಸಂಘದ ಖಜಾಂಚಿ ಜನಾರ್ಧನ, ಭಡ್ತಿ ಹೊಂದಿದ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್ ತುಂಬೆ , ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಸಂತೋಷ್ ಮತ್ತಿತರರು ಹಾಜರಿದ್ದರು.
