ಬಂಟ್ವಾಳ: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ಬೆಳಿಗ್ಗೆ ಮಾಣಿ ಸಮೀಪದ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಉಡುಪಿ ಗೆ ೩೦ ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಸುಮಾರು ೫.೩೦ರ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.
ಘಟನೆಯ ವೇಳೆ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಲ್ಟಿಯಾದ ಸಂದರ್ಭದಲ್ಲಿ ಪ್ರಯಾಣಿಕರು ಬಸ್ ನ ಹಿಂಬದಿಯ ಗ್ಲಾಸ್ ಒಡೆದು ಹೊರಗೆ ಬಂದಿದ್ದಾರೆ. ವಿಟ್ಲ ಪೋಲಿಸರು ಸ್ಥಳಕ್ಕೆ ಬೇಟಿ ನೀಡಿ ತನಿಖೆ ನಡೆಸುತ್ತಿ
