ಬಂಟ್ವಾಳ:ತಾಲ್ಲೂಕಿನ ಸಜಿಪಮೂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯೆ ಯಮುನಾ ನಾಯ್ಕ ಮತ್ತಿತರರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಂತೆ ಮನೆ ಮನೆ ಭೇಟಿ ನೀಡಿದ ವೇಳೆ ವ್ಯಕ್ತಿಯೊಬ್ಬ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ಸಲ್ಲಿಸಿದ ಘಟನೆ ಮಂಗಳವಾರ ನಡೆದಿದೆ. ಆರೋಪಿಯನ್ನು ಸ್ಥಳೀಯ ನಿವಾಸಿ ಸತೀಶ ಪೂಜಾರಿ ಎಂದು ಗುರುತಿಸಲಾಗಿದ್ದು, ಇಲ್ಲಿನ ಕಾಂಗ್ರೆಸ್ಸಿಗರ ಮನೆ ಮನೆ ಭೇಟಿ ದೃಶ್ಯ ಮತ್ತು ಈತ ನಿಂದಿಸಿದ ಮಾತಿನ ತುಣುಕುಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳಿಗೆ ಹಾಕಿ ಅವಮಾನಿಸಿದ್ದಾನೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *