ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡಿಗೆ ನ.11ರಂದು ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ನವ ಕರ್ನಾಟಕ ಪರಿವರ್ತನಾ ರ್ಯಾಲಿ ಬಗ್ಗೆ ಮಂಗಳವಾರ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮಾತನಾಡಿದರು. ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಸುಲೋಚನಾ ಜಿ.ಕೆ ಭಟ್, ಬ್ರಿಜೇಶ್ ಚೌಟ, ಜಿ.ಆನಂದ, ಸತೀಶ್ ಕುಂಪಲ, ರಾಮದಾಸ ಬಂಟ್ವಾಳ ಮತ್ತಿತರರು ಇದ್ದರು.

