ಬಂಟ್ವಾಳ:ಜಿಲ್ಲೆಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿ ಎಂಬಂತೆ ಇಲ್ಲಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಸಮೀಪದ ಮೈದಾನದಲ್ಲಿ ನಿರ್ಮಿಸಲಾಗುತ್ತಿರುವ ವೈಶಿಷ್ಟ್ಯಪೂರ್ಣ ಬೃಹತ್ ಗಾತ್ರದ ವೇದಿಕೆ ಮತ್ತು ಸಭಾಂಗಣದಲ್ಲಿ ಇದೇ 11ರಂದು ನಡೆಯಲಿರುವ ಬಿಜೆಪಿ ಪರಿವರ್ತನಾ ರ್ಯಾಲಿಗೆ ಸುಮಾರು 25ಸಾವಿರಕ್ಕೂ ಮಿಕ್ಕಿ ಮಂದಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಶನಿವಾರ ಸಂಜೆ ನಡೆದ ಬಿಜೆಪಿ ಗ್ರಾಮ ಮಟ್ಟದ ಮುಖಂಡರ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.ಈಗಾಗಲೇ ಬೆಂಗಳೂರಿನಲ್ಲಿ ರ್ಯಾಲಿ ಯಶಸ್ವಿಯಾಗಿ ನಡೆದಿದ್ದು, ಜಿಲ್ಲೆಯಾದ್ಯಂತ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಕಂಡು ಬಂದಿದೆ. ಅಂದು ಬೆಳಿಗ್ಗೆ ತಾಲ್ಲೂಕಿನ ಪುಂಜಾಲಕಟ್ಟೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಆಗಮಿಸುತ್ತಿರುವ ಬಿಜೆಪಿ ಪರಿವರ್ತನಾ ರ್ಯಾಲಿಗೆ ಅಭೂತಪೂರ್ವ ಸ್ವಾಗತ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಕೋಟ್ಯಾನ್, ಬ್ರಿಜೇಶ್ ಚೌಟ, ಸುದರ್ಶನ್, ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಸತೀಶ ಕುಂಪಲ, ಮಾಜಿ ಶಾಸಕರಾದ ಕೆ.ಪದ್ಮನಾಭ ಕೊಟ್ಟಾರಿ, ಎ.ರುಕ್ಮಯ ಪೂಜಾರಿ ಮತ್ತಿತರರು ಮಾತನಾಡಿದರು.
ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ ಮಾತನಾಡಿ, ಪ್ರತೀ ಬೂತ್ ಮಟ್ಟದಿಂದ ತಲಾ ನೂರು ಮಂದಿ ಕಾರ್ಯಕರ್ತರು ಆಗಮಿಸುತ್ತಿದ್ದು, ಈಗಾಗಲೇ ಸುಸಜ್ಜಿತ ಸಭಾಂಗಣ ಮತ್ತು ಭೋಜನ ಶಾಲೆ ಸಿದ್ಧಗೊಳ್ಳುತ್ತಿದೆ ಎಂದರು.
ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಕಾರ್ಯದರ್ಶಿ ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಪ್ರಮುಖರಾದ ಎ.ಗೋವಿಂದ ಪ್ರಭು, ಬಿ.ದಿನೇಶ್ ಭಂಡಾರಿ, ಮಹಾಬಲ ಶೆಟ್ಟಿ, ರೋನಾಲ್ಡ್ ಡಿಸೋಜ, ವಜ್ರನಾಥ ಕಲ್ಲಡ್ಕ, ಸಂತೋಷ್ ಕುಮಾರ್ ರಾಯಿ, ವಸಂತ ಕುಮಾರ್ ಅಣ್ಣಳಿಕೆ, ಪುರುಷೋತ್ತಮ ಶೆಟ್ಟಿ, ವಿಜಯ ರೈ ಆಲದಪದವು, ನೇಮಿರಾಜ್‍ರೈ, ಮಚ್ಚೇಂದ್ರ ಸಾಲಿಯಾನ್, ಆನಂದ ಶಂಭೂರು, ಬಾಲಕೃಷ್ಣ ಸೆರ್ಕಳ, ಯಶೋಧರ ಕರ್ಬೆಟ್ಟು, ಭಾರತಿ ಎಸ್.ಚೌಟ, ನಳಿನಿ ಬಿ.ಶೆಟ್ಟಿ, ರಂಜಿತ್ ಮೈರ, ಜನಾರ್ಧನ ಬೊಂಡಾಲ, ಜಿನೇಂದ್ರ ಜೈನ್, ತನಿಯಪ್ಪ ಗೌಡ, ಕಿಶೋರ್ ಶೆಟ್ಟಿ, ಶಶಿಕಾಂತ್ ಶೆಟ್ಟಿ ಮತ್ತಿರರು ಇದ್ದರು.
