ಬಂಟ್ವಾಳ : ಸಮಾಜದ ಶೋಷಿತ ವರ್ಗ ಮತ್ತು ಹಿಂದುಳಿದ ವರ್ಗಗಳಿಗೆ ಉಚಿತ ಕಾನೂನು ನೆರವು ನೀಡಲಾಗುವುದು , ಸಮಾಜದಲ್ಲಿರುವುದು ದುಶ್ಚಟಗಳ ಬಗ್ಗೆ ಅರಿವು ಮೂಡಿಸುವುದು , ಜನರಲ್ಲಿ ಕಾನೂನಿನ ಬಗ್ಗೆ ಅರಿವು ಉಂಟುಮಾಡುವುದು , ಕಾನೂನು ಸಾಕ್ಷರತೆ ಉಚಿತ ಕಾನೂನು ನೆರವು ಮತ್ತು ಸಲಹೆಯನ್ನು ಕೊಡುವುದು , ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ಶೀಘ್ರವಾಗಿ ಕಡಿಮೆ ಖರ್ಚಿನಲ್ಲಿ ಇತ್ಯರ್ಥಗೊಳಿಸುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು. ನುಡಿದರು.
ಅವರು ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

KAR_1721

KAR_1719

KAR_1750ವಕೀಲರ ಸಂಘದ ಅಧ್ಯಕ್ಷ ವೆಂಕಟ್ರಮಣ ಶೆಣೈ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರಕಾಶ್ ಸಿ.ಡಿ. , ಸಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ, ಮೈರಾನ್ ಪಾದೆ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.

KAR_1731

KAR_1734
ಉಪಾಧ್ಯಕ್ಷ ಸುರೇಶ್ ಕುಮಾರ್ ನಾವೂರು ಸ್ವಾಗತಿಸಿದರು. ನ್ಯಾಯವಾದಿ ಆಶಾಮಣಿ ಡಿ.ರೈ ವಂದಿಸಿ ಪ್ರಧಾನ ಕಾರ್ಯದರ್ಶಿ ರಾಜಾರಾಮ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ನ್ಯಾಯಾಧೀಶರು ಮೈರಾನ್ ಪಾದೆ ಯ ಮನೆ ಮನೆ ಗೆ ಭೇಟಿ ನೀಡಿ ಕಾನೂನು ಮಾಹಿತಿಯ ಕರಪತ್ರ ವಿತರಿಸಿದರು.

By suddi9

Leave a Reply

Your email address will not be published. Required fields are marked *