ಮ0ಗಳೂರು : ಪ್ರಸವ ಪೂರ್ವ & ಗರ್ಭಪೂರ್ವ ಲಿಂಗ ಪತ್ತೆ ತಡೆ ಕಾಯ್ದೆ & ಕಾನೂನು(Pಅ & Pಓಆಖಿ)ನಿನ ಬಗ್ಗೆ ಅರಿವು ಮೂಡಿಸಲು ಮಂಗಳೂರು ತಾಲೂಕಿನ ಗ್ರಾಮೀಣ & ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೊಳಪಟ್ಟ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹಾಗೂ ಕಿರಿಯ ಪುರುಷ ಆರೋಗ್ಯ ಸಹಾಯಕರು, ಹಾಗೂ ಆಶಾ ಕಾರ್ಯಕರ್ತೆಯರು(ನಗರ), ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಯವರಿಗೆ ಒಂದು ದಿನದ ಕಾರ್ಯಾಗಾರವನ್ನು ನವೆಂಬರ್ 28 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆರ್ಎಪಿಸಿಸಿ ಸಭಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
