ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ‘ಮಾನಸಿಕ ಆರೋಗ್ಯ ಅರಿವು ಹಾಗೂ ನೇತ್ರದಾನ’ ಮಾಹಿತಿ ಕಾರ್ಯಕ್ರಮ ನವೆಂಬರ್ 24ರಂದು 11 ಗಂಟೆಗೆ ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಗಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಂ.ಆರ್. ರವಿ ನೆರವೇರಿಸಲಿದ್ದಾರೆ. ಶ್ರೀ ಜಗನ್ನಾಥ ಶೆಟ್ಟಿ ಬಾಳ, ಡಾ| ರಾಮಕೃಷ್ಣ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ| ರತ್ನಾಕರ್, ಮಾನಸಿಕ ರೋಗ ತಜ್ಞ ಡಾ| ಶ್ರೀನಿವಾಸ್ ಭಟ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
