ವಿಟ್ಲ:ದ ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿನ ವಾರ್ಷಿಕ ಕ್ರೀಡಾ ಕೂಟವನ್ನು ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಉದ್ಘಾಟಿಸಿ `ಮಕ್ಕಳು ಕ್ರೀಡಾ ಕೂಟಗಳಲ್ಲಿ ಭಾಗವಹಿಸಿ ನಿಮ್ಮ ದೈಹಿಕ ಮತ್ತು ಮಾನಸಿಕ ಬಲ ಹೆಚ್ಚಿಸಿಕೊಂಡು ದೇಶಕ್ಕೆ ಮಾದರಿ ವ್ಯಕ್ತಿಗಳಾಗಿ’ ಎಂದು ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಕೆ ವಿಟ್ಲ ಅರಮನೆ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕ ವಿಶ್ವನಾಥ ಗೌಡ ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
