ಸಿದ್ಧಕಟ್ಟೆ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ರಮಾನಂದ ವಾರ್ಷಿಕ ವರದಿ ಮಂಡಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಗ್ರಾಮ ಪಂಚಾಯಿತಿ ಸದಸ್ಯರಾದ ದೇವಪ್ಪ ಕರ್ಕೇರ, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ಎಪಿಎಂಸಿ ಸದಸ್ಯ ಎಂ.ಪದ್ಮರಾಜ ಬಲ್ಲಾಳ್, ಸಿದ್ಧಕಟ್ಟೆ ರೋಟರಿ ಸಮುದಾಯ ದಳ ಅಧ್ಯಕ್ಷ ವಾಸುದೇವ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೀತಾರಾಮ ಶಾಂತಿ ಕೆ., ವಿದ್ಯಾರ್ಥಿ ನಾಯಕ ಪ್ರಥಮ್ ಮತ್ತಿತರರು ಇದ್ದರು.
