ವಿಟ್ಲ: ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವವು ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಟ್ಲ ಬೊಬ್ಬೆಕ್ಕೇರಿ ಪುಷ್ಪಕ್ ಕ್ಲಿನಿಕ್ ನ ಡಾ| ವಿ ಕೆ ಹೆಗ್ಡೆ ಸಭಾಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾನತ್ತಡ್ಕ ಶ್ರೀ ಕೃಷ್ಣ ವಿದ್ಯೋದಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಸೋಫಿಯಾ ಮಸ್ಕರೇನಸ್ ಭಾಗವಹಿಸಿದ್ದರು. ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಪದ್ಮಯ್ಯ ಗೌಡ, ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್, ಶಾಲಾ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ವೇದಿಕೆಯಲ್ಲುದ್ದರು. ಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.



