ಬೆಂಗಳೂರು: ಹೆಸರಾಂತ `ನಾಗಿಣಿ’ ಧಾರಾವಾಹಿಯ ನಟ ದೀಕ್ಷಿತ್ ಶೆಟ್ಟಿ ಅವರ ಮೇಲೆ ಗುರುವಾರ ವಿಜಯನಗರದ ಮಾರುತಿ ಮಂದಿರದ ಬಳಿ ತಡರಾತ್ರಿ ಮೂವರು ದುಷ್ಕರ್ಮಿಗಳು ಹಲ್ಲೆಗೆ ಯತ್ನ ನಡೆಸಿದ್ದಾರೆ.
ದೀಕ್ಷಿತ್ ಪಲ್ಸರ್ ಬೈಕ್ ನಲ್ಲಿ ಬಂದ ಮೂವರ ಜತೆ ಸೆಲ್ಫಿ ತೆಗೆಯಲು ನಿರಾಕರಿಸಿದ್ದಕ್ಕೆ ಕುಡಿದ ಅಮಲಿನಲ್ಲಿದ್ದ ಅವರು ನಟನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೇ ದೀಕ್ಷಿತ್ ಕಾರಿನ ಗಾಜು ಪುಡಿ ಪುಡಿಯಾಗಿದೆ.
ಈ ಸಂಬಂಧ ದೀಕ್ಷಿತ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ವಿಶೇಷ ಜಾಲ ಬೀಸಿದ್ದಾರೆ.

