ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸೇವಾದಳ ತಾಲೂಕು ಸಮಿತಿ, ಬಂಟ್ವಾಳ, ಇವರ ವತಿಯಿಂದ ಬಂಟ್ವಾಳ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ 2016-17 ಕಾರ್ಯಕ್ರಮ ಮೂಡುಪಡುಕೋಡಿ ದ.ಕ.ಜಿ.ಪಂ.ಉ.ಪ್ರಾ. ಶಾಲೆಯಲ್ಲಿ ಮಂಗಳವಾರ ಜರಗಿತು.
ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮೀನಾರಾಯಣ ಉಡುಪ ಮೇಳವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆಯ ಸಂದೇಶವನ್ನು ತುಂಬಿ ಅವರನ್ನು ದೇಶದ ನಾಗರಿಕರನ್ನಾಗಿ ಪರಿವರ್ತಿಸುವಲ್ಲಿ ಭಾರತ ಸೇವಾದಳದ ಕಾರ್ಯ ಅನುಪಮ ಎಂದು ಹೇಳಿದರು. ಉದ್ಯಮಿ ಹರೀಂದ್ರ ಪೈ ಧ್ವಜಾರೋಹಣ ಗೈದರು. ಇರ್ವತ್ತೂರು ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಅಧ್ಯಕ್ಷತೆ ವಹಿಸಿದ್ದರು. ಪಿಲಾತಬೆಟ್ಟು ಸಿ.ಎ. ಬ್ಯಾಂಕ್ ಮಾಜಿ ಕಾರ್ಯನಿರ್ವಹಣಾಧಿಕಾರಿ ಬೂಬ ಕುದ್ಕಂದೋಡಿ ಮೆರವಣಿಗೆಗೆ ಚಾಲನೆ ನೀಡಿದರು. ಕಂಬಳ ಪ್ರಧಾನ ತೀರ್ಪುಗಾರ ಎಂ.ರಾಜೀವ ಶೆಟ್ಟಿ ಗೌರವ ವಂದನೆ ಸ್ವೀಕರಿಸಿದರು.
ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ , ಬೆಂಗಳೂರು ಭಾ. ಸೇ. ದಳ. ಕೇಂದ್ರ ಸಮಿತಿ ಸದಸ್ಯ ಫ್ರಾನ್ಸಿಸ್ ವಿ.ವಿ., ಇರ್ವತ್ತೂರು ಪಿ.ಡಿ.ಒ. ಗಣೇಶ್ ಶೆಟ್ಟಿಗಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ದ.ಕ. ಭಾರತ ಸೇವಾದಳ ಜಿಲ್ಲಾ ಸಂಘಟಕ ಟಿ.ಎಸ್. ಮಂಜೇಗೌಡ, ಭಾರತ ಸೇವಾದಳ ಬಂಟ್ವಾಳ ತಾಲೂಕು ಕಾರ್ಯದರ್ಶಿ, ಶಿಕ್ಷಕ ಸುನೀಲ್ ಸಿಕ್ವೇರಾ, ಉಪಾಧ್ಯಕ್ಷ ಶೇಸಪ್ಪ ಮೂಲ್ಯ, ಸ್ವಾಗತ ಸಮಿತಿ ಅಧ್ಯಕ್ಷ ಶಂಕರ ಶೆಟ್ಟಿ ಬೆದ್ರಮಾರು, ಬಂಟ್ವಾಳ ವಲಯ ದೈ.ಶಿ. ಪರಿವೀಕ್ಷಕರು ರತ್ನಾವತಿ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಡಾ. ರಾಮಕೃಷ್ಣ ಎಸ್., ಶಿಕ್ಷಣ ಸಂಯೋಜಕಿಯರಾದ ಸುಜಾತಾ, ಪುಷ್ಪಾ, ಸ್ವಾಗತ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಗ್ರಾ. ಪಂ., ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿವಿಧ ಕ್ಷೇತ್ರ ಶಿಕ್ಷಣ ಸಂಪನ್ಮೂಲಾ„ಕಾರಿಗಳು, ವಿವಿಧ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ಬಂಟ್ವಾಳ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಎನ್. ಸ್ವಾಗತಿಸಿದರು. ಮೂಡುಪಡುಕೋಡಿ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕಿ ವಿಲ್ಮಾ ಮೇರಿ ಡಿ ಸೋಜಾ ವಂದಿಸಿದರು. ಭರತ್‍ರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು
ತಾಲೂಕಿನ ಸುಮಾರು 30 ಶಾಲೆಗಳ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮುನ್ನ ಇರ್ವತ್ತೂರು ಪೇಟೆಯಿಂದ ಶಾಲೆಯವರೆಗೆ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.
