ವಿಟ್ಲ: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸಭೆ ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ  ನಟೇಶ ವಿಟ್ಲ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿಎಂಸಿ ಅಧ್ಯಕ್ಷ  ಜಗನ್ನಾಥ ಕಾಸರಗೋಡು, ಪ್ರಭಾರ ಮುಖ್ಯೋಪಾಧ್ಯಾಯ ವಿಶ್ವನಾಥ.ಬಿ. ಮತ್ತಿತರರು ಉಪಸ್ಥಿತರಿದ್ದರು.

ಈ ವೇಳೆ ಸಂಘದ ಪದಾಧಿಕಾರಿಗಳ ಹಾಗೂ ಸದಸ್ಯರ ಒಮ್ಮತದಿಂದ ಸಂಘದ ಮಹಾಸಭೆಯನ್ನು ಡಿ.25ರಂದು ಶತಮಾನೋತ್ಸವ ಸ್ಮಾರಕ ಸಭಾಭವನದಲ್ಲಿ 10.30ಕ್ಕೆ ನಡೆಸುವುದು ಎಂದು ತೀರ್ಮಾನಿಸಲಾಗಿದೆ.

ಈ ವಿದ್ಯಾಸಂಸ್ಥೆಯ ಊರ-ಪರವೂರಲ್ಲಿರುವ ಹಳೆವಿದ್ಯಾರ್ಥಿಗಳು ಈ ಮಹಾಸಭೆಯಲ್ಲಿ ಭಾಗವಹಿಸಬೇಕು ಎಂದು  ಕಾರ್ಯದರ್ಶಿ ಪದ್ಮನಾಭ ಕಟ್ಟೆ ಪ್ರಕಟನೆಯಲ್ಲಿ ಕೋರಿದ್ದಾರೆ.

By suddi9

Leave a Reply

Your email address will not be published. Required fields are marked *