22

ಹೊನ್ನಾವರ: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಕೈಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ  ಘಟನೆ ಮಾಗೋಡು ಎಂಬಲ್ಲಿ  ಮಂಗಳವಾರ ನಡೆದಿದೆ.

ಇಲ್ಲಿನ ಕೊಡ್ಲಗದ್ದೆ ಸರ್ಕಾರಿ ಪ್ರೌಢಶಾಲೆಯ 9ನೆ ತರಗತಿ ವಿದ್ಯಾರ್ಥಿನಿ ಕಾವ್ಯಾ ಶೇಖರ ನಾಯ್ಕ ಹಲ್ಲೆಗೊಳಗಾದವಳು ಎಂದು ಗುರುತಿಸಲಾಗಿದೆ.

ಶಾಲೆಗೆ ತೆರಳುತ್ತಿದ್ದ ಕಾವ್ಯಾಳಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕುತ್ತಿಗೆಗೆ ಚೂರಿ ಹಾಕಲು ಯತ್ನಿಸಿದ್ದು, ಯತ್ನ ಫಲಿಸದೇ ಕೈಗೆ ಚೂರಿ ತಾಗಿದೆ ಎನ್ನಲಾಗಿದೆ.  ಬಳಿಕ ಗಾಯಗೊಂಡ ಕಾವ್ಯಾಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಜಾಗ್ರತ ಕ್ರಮವಾಗಿ ಹೊನ್ನಾವರದಲ್ಲಿ 24 ಗಂಟೆಗಳ ಕಾಲ ನಿಷೇಧಾಜ್ಞೆ ಜಾರಿ ಗೊಳಿಸಲಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ಗುರುವಾರ ಬೆಳಗ್ಗೆಯಿಂದ 24 ಗಂಟೆ ನಿಷೇಧಾಜ್ಞೆ ಹೊರಡಿಸಿ ಭಟ್ಕಳ ಉಪ ವಿಭಾಗಾಧಿಕಾರಿ ಎಂ.ಎನ್.ಮಂಜುನಾಥ್ ಆದೇಶಿದ್ದಾರೆ.

By suddi9

Leave a Reply

Your email address will not be published. Required fields are marked *