ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನಿಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಗಾದ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಮಧ್ಯಾಂತರ ಜಾಮೀನು ಪಡೆದುಕೊಂಡ ಒಂದು ದಿನ ಕಳೆಯುವಷ್ಟರಲ್ಲೇ ಇಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಗುರುವಾರ ಬಂಧನ ವಾರಂಟ್ ಜಾರಿ ಮಾಡಿದೆ.
7 ವರ್ಷದ ಹಿಂದೆ ಹಾಯ್ ಬೆಂಗಳೂರ್ ಪತ್ರಿಕೆಯಲ್ಲಿ ತನ್ನ ಬಗ್ಗೆ ಮಾನಹಾನಿ ವರದಿ ವರದಿಯೊಂದು ಪ್ರಕಟಿಸಲಾಗಿದೆಂದು ಸಂತ್ರಸ್ಥೆ ಮಹಿಳೆಯೋರ್ವರು, ರವಿ ಬೆಳೆಗೆರೆ ವಿರುದ್ಧ ದೂರು ದಾಖಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಕೂಡಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರವಿ ಬೆಳಗೆರೆಯನ್ನು ದಸ್ತಗಿರಿ ಮಾಡಿ ವಶಕ್ಕೆ ತೆಗೆದುಕೊಳ್ಳುವಂತೆ ಸಂಜಯನಗರ ಪೊಲೀಸರಿಗೆ ನಿರ್ದೇಶನ ನೀಡಿದೆ.
