666ಮೈಸೂರು: ಬೈಕ್ ಹಾಗೂ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಇಬ್ಬರು ಮೃತಪಟ್ಟಿದ್ದು, ನಿಂತಿದ್ದ ಮಹಿಳೆಗೆ ಗಾಯಗೊಂಡ  ಘಟನೆ ನಂಜನಗೂಡು ತಾಲೂಕಿನ ಮುದ್ದನಹಳ್ಳಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ಮೃತರನ್ನು ಮಹೇಶ್ (18), ರವಿ (11) ಎಂದು ಗುರುತಿಸಲಾಗಿದೆ.

 

ಅಪಘಾತದಲ್ಲಿ ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶೈಲಾ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ  ಘಟನೆ ನಡೆದ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸುದ್ದಿ ತಿಳಿದ ನಂಜನಗೂಡು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.

By suddi9

Leave a Reply

Your email address will not be published. Required fields are marked *