303

ಬೆಂಗಳೂರು: ನಮ್ಮ ರಾಜ್ಯದಲ್ಲಿ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಕೈ ಬಿಟ್ಟು ಜೆಡಿಎಸ್ ಅಧಿಕಾರಕ್ಕೆ ತರುತ್ತಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗುಜರಾತ್ ಚುನಾವಣಾ ಫಲಿತಾಂಶ ಬಿಜೆಪಿ ಹಾಗೂ ಕಾಂಗ್ರೆಸ್‌ ವಲಯದಲ್ಲಿ ನಿರಾಶೆ ತಂದಿದ್ದು, ಕರ್ನಾಟಕದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಭವಿಷ್ಯ ನುಡಿದರು.

ರಾಜ್ಯದಲ್ಲಿ ಸಿಎಂ ಅವರದೇ ಆದ ಸರಕಾರಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರೆ, ಬಿಜೆಪಿಯವರು ವೈಯಕ್ತಿಕವಾಗಿ ಹೇಳಿಕೆಗಳನ್ನು ಕೊಡುತ್ತ ಪರಿವರ್ತನಾ ಯಾತ್ರೆ ಮಾಡುತ್ತಿದ್ದಾರೆ ಎಂದ ಅವರು, ರಾಜ್ಯ ಸರಕಾರ ಎಂಟು ಸಾವಿರ ಕೋಟಿ ನೀರಾವರಿ ಯೋಜನೆಗೆ ಖರ್ಚು ಮಾಡಿದೆ ಎನ್ನುತ್ತಿದೆ.  ಆದರೆ ನಾಲೆಗಳಿಗೆ ನಾಲ್ಕು ಸಾವಿರ ಕೋಟಿ, ತುಂಗಭದ್ರಾ 1.7ಸಾವಿರ ಕೋಟಿ ಹಣ ಖರ್ಚು ಮಾಡಿದ್ದಾರೆ. ಇದರಲ್ಲಿ ಇವರ ಜೇಬಿಗೆ ಎಷ್ಟು ಬಂದಿದೆ ಎಮದು ಪ್ರಶ್ನಿಸಿದರು.

ಇನ್ನು ಬಿಜೆಪಿಯವರು ಏನು ಮಾಡಿದ್ದಾರೆ ಎನ್ನುವುದು ಗೊತ್ತಿದೆ. ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷಗಳನ್ನು ಬಿಟ್ಟು ಮೂರನೇ ಶಕ್ತಿಯಾಗಿ ನಾವು ಬರುತ್ತೇವೆ ಎನ್ನುವ ನಂಬಿಕ ನನಗಿದೆ ಎಂದರು.

 

By Suddi9

Leave a Reply

Your email address will not be published. Required fields are marked *