00101

ಮಂಗಳೂರು: ಓಖಿ ಚಂಡಮಾರುತಕ್ಕೆ ತುತ್ತಾದ ಲಕ್ಷದ್ವೀಪಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ ಹಿನ್ನೆಲೆ ನಗರದಲ್ಲಿ ವಾಸ್ತವ್ಯ ಹೂಡಲು ‍ಸೋಮವಾರ ತಡರಾತ್ರಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಸುಮಾರು.11:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರಿಗೆ ಕೇಂದ್ರ ನೌಕಾಯಾನ ರಾಜ್ಯ ಸಚಿವ ಪಿ. ರಾಧಾಕೃಷ್ಣನ್, ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಾಸಕ ಎಸ್. ಅಂಗಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮತ್ತಿತರರು ಸ್ವಾಗತಿಸಿ ಬರ ಮಾಡಿಕೊಂಡರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿಯವರಿಗೆ ಹರ್ಷೊದ್ಗಾರ ಕೂಗಿ ಸಂಭ್ರಮಿಸಿದರು.

ರಾತ್ರಿ ಸರ್ಕಿಟ್‌ಹೌಸ್‌ನಲ್ಲಿ ತಂಗಿದ್ದ ಮೋದಿ ಅವರು ಮಂಗಳವಾರ ಬೆಳಗ್ಗೆ 7.30ಕ್ಕೆ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಿದ್ದು, ಅಲ್ಲಿನ ಜನತೆಗೆ ಸಾಂತ್ವನ ಹೇಳಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಈ ಬಗ್ಗೆ ಟ್ವಿಟ್ ರ್ ನಲ್ಲಿ ತಾವು ಅಭಿಮಾನಿಗಳತ್ತ ಕೈ ತೋರಿಸುವ ಫೋಟೊವೊಂದಿಗೆ ಪ್ರತಿಕ್ರಿಯಿಸಿರುವ ಮೋದಿ ಅವರು, ‘ಕಳೆದ ಸಂಜೆ ಭವ್ಯ ಸ್ವಾಗತ ಕೋರಿದ ಮಂಗಳೂರಿನ ಜನರಿಗೆ ನನ್ನ ಧನ್ಯವಾದಗಳು’ ಎಂದಿದ್ದಾರೆ.

By Suddi9

Leave a Reply

Your email address will not be published. Required fields are marked *