89

ಮುಂಬಯಿ, ಡಿ.19: ಚೆಂಬೂರು ಕರ್ನಾಟಕ ಪೂರ್ವ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಕಿರಿಯ ಮಹಾ ವಿದ್ಯಾಲಯ ಮತ್ತು ಕಾನೂನು ಕಾಲೇಜು ನಡೆಸುತ್ತಾ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನಾಗಿ ಮುನ್ನಡೆಸುತ್ತಿರುವ ಚೆಂಬೂರು ಕರ್ನಾಟಕ ಸಂಘದ  ವಾರ್ಷಿಕ ಸಾಹಿತ್ಯ-ಸಂಸ್ಕೃತಿ, ಸನ್ಮಾನ ಸಂಭ್ರಮ ‘ಸಾಹಿತ್ಯ ಸಹವಾಸ 2017-18’ ಕಾರ್ಯಕ್ರಮವು ಡಿ.24ರಂದು  ಚೆಂಬೂರು ಘಾಟ್ಲಾ ಅಲ್ಲಿನ ಸಂಸ್ಥೆಯ ಸಂಕುಲದಲ್ಲಿ ಆಯೋಜಿಸಲಾಗಿದೆ.

ಅಂದು ನಡೆಯುವ ಕಾರ್ಯಕ್ರಮವನ್ನು ಮುಂಬೈ ಕ್ರೈಂ ವಿಭಾಗದ ಹೆಚ್ಚುವರಿ ಪೋಲಿಸ್ ಆಯುಕ್ತ ಕೆ.ಎಂ.ಎಂ ಪ್ರಸನ್ನ ಅವರು ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ನ್ಯಾಯವಾದಿ ಎಚ್.ಕೆ ಸುಧಾಕರ ಅರಾಟೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಘದಿಂದ ಕೊಡುಗೆ ಮಾಡುವ ‘ರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ’ಗೆ ಹರೇಕಳ ಹಾಜಬ್ಬ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *