ಕೈಕಂಬ:ಗುರುಪುರಕ್ಕೆ ಹತ್ತಿರದ ಬಂಡಸಾಲೆಯಲ್ಲಿ ಡಿ. 20ರಂದು ಸಂಜೆ ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ, ಬೈಕ್ ಸವಾರ ಗಂಭೀರ ಗಾಯಗೊಂಡ ದುರ್ಘಟನೆ ನಡೆದಿದೆ. ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಸ್ ಮಂಗಳೂರಿನ ಕಡೆಗೆ ಸಾಗುತ್ತಿದ್ದಾಗ ಎದುರು ದಿಕ್ಕಿನಿಂದ ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ ಎನ್ನಲಾಗಿದೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
