ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ.) ಮಂಗಳೂರು ಇವರ ಆಶ್ರಯದಲ್ಲಿ 26 ನೇ ಪದ್ಮಶಾಲಿ ಕ್ರೀಡೋತ್ಸವವು ಭಾನುವಾರ ದಿನಾಂಕ 24 ಡಿಸೆಂಬರ್ ರಂದು ಬೆಳಿಗ್ಗೆ 9.30 ಗಂಟೆಯಿಂದ ಸಾಯಂಕಾಲ 5.30 ಗಂಟೆಯವರೆಗೆ ಪರ್ಕಳ ಪ್ರೌಢ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಶ್ರೀ ನೋಣಯ್ಯ ಶೆಟ್ಟಿಗಾರ್ ಕೊಯಿಲ, ಸಿದ್ದಕಟ್ಟೆ ಕ್ರೀಡೋತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.ಮತ್ತು ಬಾರಕೂರು ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಿ ಪುರುಷೋತ್ತಮ ಶೆಟ್ಟಿಗಾರ್ ರವರು ಧ್ವಜಾರೋಹಣ ಮಾಡಲಿದ್ದಾರೆ.
ಪರ್ಕಳ ವೀರಭದ್ರ ಸೌಹಾರ್ದ ಕ್ರೆಡಿಟ್ ಕೋ ಆಪರೇಷನ್ ನ ಅಧ್ಯಕ್ಷರಾದ ಶ್ರೀ ಸುಕೇಶ್ ಶೆಟ್ಟಿಗಾರ್ ರವರು ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ. ಈ ಕ್ರೀಡೋತ್ಸವವು ಉಭಯ ಜಿಲ್ಲೆಗಳ ವ್ಯಾಪ್ತಿಯಲ್ಲಿರುವ 16 ಶ್ರೀ ವೀರಭದ್ರ ದೇವಸ್ಥಾನಗಳ ಆಡಳಿತ ಮೊಕ್ತೇಸರರು ಮತ್ತು 11 ವಲಯ ಸಂಘ ಸಂಸ್ಥೆಗಳ ಅಧ್ಯಕ್ಷರುಗಳ ಉಪಸ್ಥಿತಿಯಲ್ಲಿ ನಡೆಯಲಿದ್ದು ಎಲ್ಲ ಸಮಾಜ ಭಾಂದವರು ಪಾಲ್ಗೊಳ್ಳಬೇಕಾಗಿ ದಕ ಜಿಲ್ಲಾ ಪದ್ಮಶಾಲಿ ಮಹಾಸಭಾ ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಮ್ ಶೆಟ್ಟಿಗಾರ್ ಮಣಿಪಾಲ ಮತ್ತು ಕ್ರೀಡಾ ಸಂಚಾಲಕ ಕೆ ಸುರೇಂದ್ರ ಶೆಟ್ಟಿ ಮಂಗಳೂರು ಇವರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
