963.01

ಉಡುಪಿ: ಮಹಿಳೆಯೊಬ್ಬರಿಗೆ ಖಾಸಗಿ ಬಸ್ ವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉಚ್ಚಿಲದ ರಾಷ್ಟ್ರೀಯ ಹೆದ್ದಾರಿ- 66ರಲ್ಲಿ ಗುರುವಾರ ನಡೆದಿದೆ.

ಮೃತ ಮಹಿಳೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಬಬ್ಬು ಸ್ವಾಮಿ ಗ್ಯಾರೇಜ್ ಬಳಿ ಗುಜರಿ ಹೆಕ್ಕುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಮೃತ ಮಹಿಳೆಯ ವಿಳಾಸ-ಪರಿಚಯ ತಿಳಿದು ಬಂದಿಲ್ಲ ಎನ್ನಲಾಗಿದೆ.

ಸುದ್ದಿ ತಿಳಿದು ಪಡುಬಿದ್ರೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ, ಮಹಿಳೆಯ ಮೃತಹೇದವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *