
ಚಿತ್ರದುರ್ಗ: 9 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ಧರಣಿ(21 ) ಎಂದು ಗುರತಿಸಲಾಗಿದೆ.
ಆರೋಪಿಯ ಮನೆ ಎದುರು ಆಟವಾಡುತ್ತಿದ್ದ ಮೂರನೇ ತರಗತಿಯ ಬಾಲಕಿಗೆ ಚಾಕಲೇಟ್ ಕೊಡಿಸುವ ಆಮೀಷ ತೊಡ್ಡಿ ಅತ್ಯಾಚಾರಕ್ಕೆ ಯತ್ನಿಸಿದ್ದು, ತೀವ್ರ ಅಸ್ವಸ್ಥಳಾಗಿರುವ ಬಾಲಕಿಯನ್ನು ನಗರದ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
