ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಮಂಗಳವಾರ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಎರಡನೇ ಬಾರಿ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ.
ಈ ವೇಳೆ ರಾಜ್ಯಪಾಲ ಓಂ ಪ್ರಕಾಶ್ ಕೊಹ್ಲಿ ಅವರು ರೂಪಾನಿ, ಉಪಮುಖ್ಯಮಂತ್ರಿ ನಿತೀನ್ ಪಟೇಲ್ ಮತ್ತು ಸಂಪುಟದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. 9 ಶಾಸಕರು ಸಂಪುಟ ಸಚಿವರಾಗಿ, 10 ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸಿದರು.
ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ಹಿರಿಯ ಮುಖಂಡ ಎಲ್.ಕೆ ಅಡ್ವಾಣಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


