ಮಂಗಳೂರು: ವಿಜಯಪುರದಲ್ಲಿ ಇತ್ತೀಚೆಗೆ ನಡೆದ ದಲಿತ ವಿದ್ಯಾರ್ಥಿನಿ ದಾನಮ್ಮ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ದಿನೇಶ್ ಅಮ್ಟೂರು ಆಗ್ರಹಿಸಿದ್ದಾರೆ.
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಬೇಜವ್ದಾರಿ ಹೇಳಿಕೆ ನೀಡುವ ಗೃಹ ಸಚಿವರ ವರ್ತನೆ ಕಂಡರೆ ಸೂಕ್ತ ಕ್ರಮಕ್ಕೆ ಮುಂದಾಗುವ ಉತ್ಸಾಹ ಅವರಲ್ಲಿ ಕಾಣುತ್ತಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಒತ್ತಾಯಿಸಿದ ಅವರು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನಯನೇತ್ರ ದಡ್ಡಲ್ಕಾಡ್, ಶೀನ ಮಾಸ್ತಿಕಟ್ಟೆ, ಎಸ್ಸಿ ಮೋರ್ಚಾ ಸದಸ್ಯರಾದ ಉಮೇಶ್ ಕೋಟ್ಯಾನ್ ಹಾಗೂ ವಿಠಲ್ ಸಾಲ್ಯಾನ್ ಮತ್ತಿತರರಿದ್ದರು.
