2020

ಹಾವೇರಿ: ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಓರ್ವ ಗಾಯಗೊಂಡ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯ ಕಮದೋಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು ಜಿಲ್ಲೆಯ ಸವಣೂರು ಮೂಲದ ಗುರುರಾಜ (76) ಹಾಗೂ ರಾಮಣ್ಣ (59) ಎಂದು ಗುರುತಿಸಲಾಗಿದೆ.

ಸವಣೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಗಾಯಾಳನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *